Sunday, May 12, 2024
Homeತಾಜಾ ಸುದ್ದಿಮೂಡಬಿದಿರೆ: ಓಮ್ನಿ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ- ಹಿರಿಯ ಯಕ್ಷಗಾನ ಕಲಾವಿದ ವಾಮನ ಕುಮಾರ್...

ಮೂಡಬಿದಿರೆ: ಓಮ್ನಿ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ- ಹಿರಿಯ ಯಕ್ಷಗಾನ ಕಲಾವಿದ ವಾಮನ ಕುಮಾರ್ ವೇಣೂರು ಸಾವು

spot_img
- Advertisement -
- Advertisement -

ಮೂಡಬಿದಿರೆ: ಗಂಟಾಲ್ಕಟ್ಟೆಯ ಸಮೀಪ ಜ.20 ರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಯಕ್ಷಗಾನ ಕಲಾವಿದ ವಾಮನ ಕುಮಾರ್ ವೇಣೂರು (47) ಮೃತಪಟ್ಟಿದ್ದಾರೆ.

ಗಂಟಾಲ್ಕಟ್ಟೆಯ ಸಮೀಪ ಓಮ್ನಿ ಕಾರು ಬೈಕ್ ಢಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ವಾಮನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಧರ್ಮಸ್ಥಳ ಮೇಳದ , ಕದ್ರಿ ಮೇಳ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಹಿರಿಯಡ್ಕ ಮೇಳದಲ್ಲಿ ಕಲಾವಿದರಾಗಿದ್ದರು. ಕುಂದಾಪುರದ ಕೊಂಕಿ ಎಂಬಲ್ಲಿ ರಾತ್ರಿ ಯಕ್ಷಗಾನವನ್ನು ಮುಗಿಸಿ ಮನೆಗೆ ಹಿಂತಿರುಗುವಾಗ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ.

26 ವರ್ಷಗಳ ತಿರುಗಾಟ ನಡೆಸಿದ ಅನುಭವಿ ಕಲಾವಿದರಾಗಿದ್ದ ವಾಮನ ಕುಮಾರ್ ಅವರು ಹಾಸ್ಯ, ಸ್ತ್ರೀ, ಪುರುಷ, ಪುಂಡು ಹೀಗೆ ಹಲವು ಪಾತ್ರಗಳನ್ನು ಮಾಡಿ ಅಭಿಮಾನಿಗಳ ಮನಗೆದ್ದಿದ್ದರು . ವಾಮನ್ ಕುಮಾರ್ ಅವರ ಸಾವಿಗೆ ಯಕ್ಷಗಾನ ಕಲಾವಿದರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

- Advertisement -
spot_img

Latest News

error: Content is protected !!