Thursday, June 4, 2026
Homeಕರಾವಳಿನೆಲ್ಯಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ

ನೆಲ್ಯಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ

- Advertisement -
- Advertisement -

ನೆಲ್ಯಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಮಹಿಳೆ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡಿದ್ದಾರೆ.

ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿ ಅಶ್ವಿನಿ ಆಂಬುಲೆನ್ಸ್ ನಲ್ಲಿ ನೆಲ್ಯಾಡಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!