Saturday, June 27, 2026
Homeಕರಾವಳಿಮಂಗಳೂರು: ಬ್ರೇಕ್ ಫೇಲಾಗಿ ಕಾರಿಗೆ ಡಿಕ್ಕಿ ಹೊಡೆದ ಬಸ್

ಮಂಗಳೂರು: ಬ್ರೇಕ್ ಫೇಲಾಗಿ ಕಾರಿಗೆ ಡಿಕ್ಕಿ ಹೊಡೆದ ಬಸ್

- Advertisement -
- Advertisement -

ಮಂಗಳೂರು: ಬ್ರೇಕ್ ಫೇಲ್‌ಗೊಳಗಾಗಿ ಬಸ್‌ ಕಾರಿಗೆ ಢಿಕ್ಕಿ ಹೊಡೆದ ಘಟನೆ ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ನಡೆದಿದೆ. ಬಸ್‌ ಚಾಲಕನ ಸಮಯ ಪ್ರಜ್ಞೆಯಿಂದ 21 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಮಂಗಳೂರಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ ತೊಕ್ಕೊಟ್ಟು ಬಸ್ ನಿಲ್ದಾಣಕ್ಕೆ ಹೋಗಬೇಕಾಗಿತ್ತು. ಆದರೆ ಬ್ರೇಕ್ ಫೇಲ್ ಆದ ಕಾರಣ ನೇರ ತೊಕ್ಕೊಟ್ಟು ಜಂಕ್ಷನ್‌ಗೆ ಬಸ್ಸನ್ನು ಚಲಾಯಿಸಿದ್ದು, ಈ ವೇಳೆ ಉಳ್ಳಾಲದಿಂದ ಮುಡಿಪುವಿನತ್ತ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಜನದಟ್ಟಣೆ ಹೆಚ್ಚಿರುವ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಭಾರೀ ಅನಾಹುತ ತಪ್ಪಿದೆ.

ಕಾರಿನಲ್ಲಿದ್ದ ಮುಡಿಪು ನಿವಾಸಿ ಮೊಹಮ್ಮದ್ ಮತ್ತು ಅವರ ಸಂಬಂಧಿ ಪ್ರಯಾಣಿಕ ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆಯ ಪರಿಣಾಮ ಕಾರಿನ ಒಂದು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಜೆಪ್ಪು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!