Saturday, June 6, 2026
Homeಕರಾವಳಿಬಂಟ್ವಾಳ : ಸರಕಾರಿ ಬಸ್ ಮತ್ತು ಕಾರು ಮಧ್ಯೆ ಢಿಕ್ಕಿ; ಕಾರು ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ : ಸರಕಾರಿ ಬಸ್ ಮತ್ತು ಕಾರು ಮಧ್ಯೆ ಢಿಕ್ಕಿ; ಕಾರು ಚಾಲಕನಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ : ಸರಕಾರಿ ಬಸ್ ಮತ್ತು ಕಾರು ನಡುವೆ ಢಿಕ್ಕಿಯಾಗಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ

ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.

.

 ಕಾವಳಪಡೂರು ಗ್ರಾಮದ ಮಧ್ವಪಲ್ಕೆ ನಿವಾಸಿ ಸಿರಿಲ್ ಡಿಸೋಜ ಗಂಭೀರ ಗಾಯಗೊಂಡ ಕಾರು ಚಾಲಕ. ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದ ಬಸ್, ವಗ್ಗ ಕಡೆಗೆ ಸಾಗುತ್ತಿದ್ದ ಕಾರ್‌ಗೆ ಬಾಂಬಿಲ ಸೇತುವೆ ಬಳಿಯ ತಿರುವಿನಲ್ಲಿ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಬಸ್‌ನ ಅಡಿಯಲ್ಲಿ ಸಿಲುಕಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಬಳಿಕ ಬಸ್‌ಅನ್ನು ಹಿಂತೆಗೆದು ಕಾರು ಚಾಲಕನನ್ನು ಹೊರ ತೆಗೆಯಲಾಗಿತ್ತು. ತಕ್ಷಣವೇ ಸ್ಥಳೀಯರು ಖಾಸಗಿ ಅಂಬ್ಯಲೆನ್ಸ್ ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸಿರಿಲ್ ಅವರ ಕಾಲು ಮುರಿತಗೊಂಡಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂದರ್ಭದಲ್ಲಿ ಬಸ್ ಚಾಲಕನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು. ಬಂಟ್ವಾಳ ಟ್ರಾಫಿಕ್ ಎಸ್ ಐ.ಸುತೇಶ್ , ಬಂಟ್ವಾಳ ಗ್ರಾಮಾಂತರ ಎಸ್‌ಐ ಹರೀಶ್ ಅವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!