Friday, June 26, 2026
Homeಕರಾವಳಿಮಂಗಳೂರುಬಂಟ್ವಾಳ; ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತ; ಇಬ್ಬರಿಗೆ...

ಬಂಟ್ವಾಳ; ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ; ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ಸೆಪ್ಟೆಂಬರ್ 20ರ ಶನಿವಾರ ನಡೆದಿದೆ. ಕಾರು ಚಾಲಕ ಕಾವಳಮೂಡೂರು ಗ್ರಾಮದ ಮಾದಡ್ಕ ನಿವಾಸಿ ಧನುಷ್ ಹಾಗೂ ಪರಾರ್ದೊಟ್ಟು ನಿವಾಸಿ ದೀಕ್ಷಿತ್ ಗಾಯಗೊಂಡವರು. ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಎಸ್ ಆರ್ ಟಿಸಿ ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಬಸ್ ನ ಮುಂಭಾಗದ ಗಾಜು ಢಿಕ್ಕಿಯ ರಭಸಕ್ಕೆ ಸಂಪೂರ್ಣ ಹುಡಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಂಟ್ವಾಳ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!