Friday, June 5, 2026
Homeಕರಾವಳಿಚಾರ್ಮಾಡಿ ಘಾಟಿಯ ಎರಡು ಹಾಗೂ ಮೂರನೇ ತಿರುವಿನ ಮಧ್ಯೆ ಅಪಘಾತ; ಹಲವು ಮಂದಿಗೆ ಗಾಯ

ಚಾರ್ಮಾಡಿ ಘಾಟಿಯ ಎರಡು ಹಾಗೂ ಮೂರನೇ ತಿರುವಿನ ಮಧ್ಯೆ ಅಪಘಾತ; ಹಲವು ಮಂದಿಗೆ ಗಾಯ

- Advertisement -
- Advertisement -

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡು ಹಾಗೂ ಮೂರನೇ ತಿರುವಿನ ಮಧ್ಯೆ ಅಪಘಾತ ಸಂಭವಿಸಿ ಹಲವು ಮಂದಿಗೆ ಗಾಯಗಳಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಚಾರ್ಮಾಡಿ ಘಾಟಿಯ ಎರಡು ಹಾಗೂ ಮೂರನೇ ತಿರುವಿನ ನಡುವೆ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದಾಗಿ ಘಾಟಿಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!