- Advertisement -
- Advertisement -
ಬಂಟ್ವಾಳ : ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬಿ.ಸಿ.ರೋಡಿನ ಸರ್ಕಲ್ ಬಳಿ ನಡೆದಿದೆ. ಕೇರಳ ಮೂಲದ ವಿಶ್ವನಾಥ ಶೆಟ್ಟಿ ಗಾಯಗೊಂಡ ಕಾರು ಚಾಲಕ.
ಬಿ ಸಿ ರೋಡ್ ಕಡೆಯಿಂದ ಮೇಲ್ಕಾರ್ ಕಡೆಗೆ ಹೋಗುತ್ತಿದ್ದ ಕಾರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -