Friday, June 5, 2026
Homeತಾಜಾ ಸುದ್ದಿಬಂಟ್ವಾಳ: ಕಾರು ಮತ್ತು ಸ್ಕೂಟರ್ ನಡುವೆ ಢಿಕ್ಕಿ- ಸ್ಕೂಟರ್ ಸವಾರ ಸಾವು

ಬಂಟ್ವಾಳ: ಕಾರು ಮತ್ತು ಸ್ಕೂಟರ್ ನಡುವೆ ಢಿಕ್ಕಿ- ಸ್ಕೂಟರ್ ಸವಾರ ಸಾವು

- Advertisement -
- Advertisement -

ಬಂಟ್ವಾಳ: ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪಿದ ಘಟನೆ ಸಜಿಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ. ಮೃತರನ್ನು ಕುಮ್ಡೇಲು ನಿವಾಸಿ ಸನ್ವಿತ್ ಎಂದು ಗುರುತಿಸಲಾಗಿದೆ.



ಈತ ಸಜೀಪ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಕೊಣಾಜೆ ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!