- Advertisement -
![]()
- Advertisement -
ಉಡುಪಿ: ಕಾರು ಮತ್ತು ಟೆಂಪೋ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮಹಿಳೆ ಹಾಗೂ ಯುವಕ ಸಾವನಪ್ಪಿರುವ ಘಟನೆ ಕಟಪಾಡಿ- ಶಿರ್ವ ಮುಖ್ಯರಸ್ತೆಯ ಪಂಜಿಮಾರು ಪಾಲಮೆ ಬಳಿ ನಡೆದಿದೆ.
ಮೂಡಬಿದಿರೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರಿಗೆ ಕಟಪಾಡಿಯಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಟೆಂಪೋ ಮುಖಾಮುಖಿಯಾಗಿ ಅವಘಡ ಸಂಭವಿಸಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿತ್ತು. ಉಡುಪಿಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಷ್ಟರಲ್ಲಿ ವೈದ್ಯರು ಯುವಕ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- Advertisement -


