- Advertisement -
![]()
- Advertisement -
ವಿಟ್ಲ: ಟಿಪ್ಪರ್ ಹಾಗೂ ಆಲ್ಟೋ ಕಾರು ಮಧ್ಯೆ ಭೀಕರ ಅಪಘಾತವಾಗಿ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಿಂಜ ಎಂಬಲ್ಲಿ ನಡೆದಿದೆ.
ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಅಲ್ಟೋ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಅನಂತಾಡಿ ಅಶ್ವತ್ತಡಿಯ ಗಂಡ ಹೆಂಡತಿ ಹಾಗೂ ಮಗು ಗಂಭೀರ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರು ನಜ್ಜು ಗುಜ್ಜಾಗಿದ್ದು ಗಾಯಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -


