Saturday, April 27, 2024
Homeಕರಾವಳಿಬಿ ಸಿ ರೋಡು- ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ಕಾರುಗಳ ಮಧ್ಯೆ ಅಪಘಾತ: ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯ

ಬಿ ಸಿ ರೋಡು- ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ಕಾರುಗಳ ಮಧ್ಯೆ ಅಪಘಾತ: ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯ

spot_img
- Advertisement -
- Advertisement -

ಬಂಟ್ವಾಳ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದವರು ಗಾಯಗೊಂಡಿರುವ ಘಟನೆ ನಿನ್ನೆ  ಮಧ್ಯರಾತ್ರಿ ಸುಮಾರು 12 ಗಂಟೆ ವೇಳೆ ಬಿ ಸಿ ರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ನಡೆದಿದೆ.  ಕಾರು ಚಾಲಕ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಖಾಸಗಿ‌ ಆಸ್ಪತ್ರೆಗೆ ದಾಖಲಾಗಿದ್ದಾರೆ .

ನಯನಾಡು ನಿವಾಸಿ ಬ್ಯಾಪ್ಟಿಸ್ ಲೊಬೊ ಅವರ ಮಗ ಚಾಲಕ ರಾಕ್ಲಿನ್ ಲೋಬೊ ( 26) ಗಂಭೀರ ಗಾಯಗೊಂಡಿದ್ದಾರೆ.  ಮಂಗಳೂರಿನಿಂದ ಪುಂಜಾಲಕಟ್ಟೆ ನಯನಾಡು ಮನೆಗೆ ರಿಟ್ಸ್ ಕಾರಿನಲ್ಲಿ ಹೋಗುತ್ತಿದ್ದಾಗ ರಾಕ್ಲಿನ್ ಅವರು ಹೋಗುತ್ತಿದ್ದಾಗ ವಾಮದಪದವಿನಲ್ಲಿ ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸಿ ಮಂಜೇಶ್ವರಕ್ಕೆ ಹೋಗುತ್ತಿದ್ದ ವೇಳೆ ಎರಿಟಿಗಾ ಕಾರು ಹಾಗೂ ರಿಟ್ಸ್ ಕಾರಿನ ಮಧ್ಯೆ ಬಡಗುಂಡಿಯಲ್ಲಿ ಅಪಘಾತ ಸಂಭವಿಸಿದೆ.

ಎರಿಟಿಗಾ ಕಾರಿನಲ್ಲಿ ಸುಮಾರು 12 ಮಂದಿ ಪ್ರಯಾಣಿಕರಿದ್ದು ಎಲ್ಲರಿಗೂ ಗಾಯವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!