Sunday, June 7, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಎರಡು ಕಾರುಗಳ ನಡುವೆ ಡಿಕ್ಕಿ; ಮೂವರಿಗೆ ಗಂಭೀರ ಗಾಯ

ಬೆಳ್ತಂಗಡಿ; ಎರಡು ಕಾರುಗಳ ನಡುವೆ ಡಿಕ್ಕಿ; ಮೂವರಿಗೆ ಗಂಭೀರ ಗಾಯ

- Advertisement -
- Advertisement -

ಬೆಳ್ತಂಗಡಿ; ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾಯನಕೆರೆ ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಏಪ್ರಿಲ್ 21ರ ಸಂಜೆ ನಡೆದಿದೆ.

ಕಾರಿನಲ್ಲಿದ್ದ ಗೇರುಕಟ್ಟೆಯ ಕುಸುಮಾವತಿ (75), ಭಾಗ್ಯವತಿ (50) ಹಾಗೂ ವೈಭವ್ (23) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರು ಗುರುವಾಯನಕೆರೆಯಿಂದ ಹಾಗೂ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ಕಾರುಗಳು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

- Advertisement -

Latest News

error: Content is protected !!