Thursday, May 9, 2024
Homeತಾಜಾ ಸುದ್ದಿಬೆಳ್ತಂಗಡಿ : ಸ್ಕೂಟರ್ - ಗೂಡ್ಸ್ ವಾಹನ ನಡುವೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ : ಸ್ಕೂಟರ್ – ಗೂಡ್ಸ್ ವಾಹನ ನಡುವೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಬೆಳ್ತಂಗಡಿ : ಸ್ಕೂಟರ್ ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ನಡೆದಿದ್ದು ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಪ್ರಸನ್ನ ಕಾಲೇಜ್ ಬಳಿ ಡಿ.25 ರಂದು ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪ್ರಸನ್ನ ಕಾಲೇಜಿ ಬಳಿ ಡಿ.25 ಸಂಜೆ ಸುಮಾರು 7:30 ಕ್ಕೆ ಚಾರ್ಮಾಡಿ ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಹಾಗೂ ಚಾರ್ಮಾಡಿ ಕಡೆಗೆ ಹೋಗುತ್ತಿದ್ದ ಆಶೋಕ್ ಲೈಲ್ಯಾಂಡ್ ಕಂಪನಿಯ ಗೂಡ್ಸ್ ವಾಹನ ನಡುವೆ ಅಪಘಾತ ನಡೆದಿದ್ದು ಈ ವೇಳೆ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾನೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಅಣ್ಣಿ ಪೂಜಾರಿಯ ಪುತ್ರ ವೃತ್ತಿಯಲ್ಲಿ ಫೈಂಟರ್ ಕೆಲಸ ಮಾಡುತ್ತಿದ್ದ ಪುರುಷೋತ್ತಮ ಪೂಜಾರಿ(20) ಸಾವನ್ನಪ್ಪಿದ ಯುವಕ ಎಂದು ಗುರುತಿಸಲಾಗಿದೆ. ಶವವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!