Thursday, June 4, 2026
HomeUncategorizedಗುಂಡ್ಯ:  ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ

ಗುಂಡ್ಯ:  ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ

- Advertisement -
- Advertisement -

ಗುಂಡ್ಯ:  ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಐವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿರುವ  ಗುಂಡ್ಯ ಸಮೀಪ ನಡೆದಿದೆ.

ಧರ್ಮಸ್ಥಳದಿಂದ ನಂಜನಗೂಡಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಮಧ್ಯೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಶಿರಾಡಿ ಗಡಿ ದೇವಸ್ಥಾನದ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

2ಘಟನೆಯಲ್ಲಿ ಬಸ್ಸಿನಲ್ಲಿದ್ದ ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಟ್ಯಾಂಕರ್ ಚಾಲಕ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಟ್ಯಾಂಕರ್ ಚಲಾಯಿಸಿಕೊಂಡು ಬಂದ ಪರಿಣಾಮ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಬಸ್ ಚಾಲಕ ಮೈಸೂರು  ನಿವಾಸಿ ಅನಿಲ್‌ಕುಮಾರ್ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

- Advertisement -

Latest News

error: Content is protected !!