Thursday, June 4, 2026
Homeಕರಾವಳಿಉಡುಪಿಗುಂಡ್ಯ;ಕೆಎಸ್ಸಾರ್ಟಿಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ; ಹಲವರಿಗೆ ಗಾಯ

ಗುಂಡ್ಯ;ಕೆಎಸ್ಸಾರ್ಟಿಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ; ಹಲವರಿಗೆ ಗಾಯ

- Advertisement -
- Advertisement -

ಗುಂಡ್ಯ;ಕೆಎಸ್ಸಾರ್ಟಿಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಢಿಕ್ಕಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪ ಸೆ.23ರಂದು ಸಂಜೆ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸು ನಡುವೆ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಟ್ಯಾಂಕರ್ ಹಾಗೂ ಬಸ್ ಚಾಲಕ ಸಹಿತ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಈ ಪೈಕಿ ಗಂಭೀರ ಗಾಯಗೊಂಡಿರುವ ಟ್ಯಾಂಕರ್ ಚಾಲಕ, ಬಸ್ಸಿನಲ್ಲಿದ್ದ ಮಹಿಳೆ ಸಹಿತ ಇಬ್ಬರು ಪ್ರಯಾಣಿಕರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಸಣ್ಣಪುಟ್ಟ ಗಾಯಗೊಂಡ ಹಲವು ಪ್ರಯಾಣಿಕರು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!