Tuesday, June 9, 2026
Homeಕರಾವಳಿಮಂಗಳೂರುಬಂಟ್ವಾಳ : ಬೈಕ್ ಗೆ ಲಾರಿ ಹಿಂಬದಿಯಿಂದ ಢಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ : ಬೈಕ್ ಗೆ ಲಾರಿ ಹಿಂಬದಿಯಿಂದ ಢಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಬಂಟ್ವಾಳ : ಬೈಕ್ ಗೆ ಲಾರಿ ಹಿಂಬದಿಯಿಂದ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ. ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (47) ಮೃತ ದುರ್ದೈವಿ.

ರಾಮನಾಯ್ಕ್ ಅವರು ಮುಡಿಪುನಿಂದ ಬಿ.ಸಿ.ರೋಡಿನ ಕಡೆಗೆ ಸ್ಕೂಟರ್ ನಲ್ಲಿ ಬರುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿ ಢಿಕ್ಕಿ ಹೊಡೆದಿದ್ದು, ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.

ರಾಮನಾಯ್ಕ ಅವರು ಬಂಟ್ವಾಳ ಬೈಪಾಸ್ ನಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!