- Advertisement -
- Advertisement -
ಬೆಂಗಳೂರು; ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೆಳ್ತಂಗಡಿಯ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ. ಇಂದಬೆಟ್ಟುವಿನ ಸನಾತನಿ ಮನೆಯ ವಸಂತ ಗೌಡರ ಪುತ್ರ ತುಷಾರ್ ಗೌಡ(22) ಮೃತ ಯುವಕ.
ತುಷಾರ್ ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂಬಿಎ ವಿದ್ಯಾರ್ಥಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಟ್ರಾಫಿಕ್ ಸ್ಟೇಷನ್‌ನಲ್ಲಿ ದೂರು ದಾಖಲಾಗಿದೆ.
- Advertisement -