Thursday, June 4, 2026
Homeಕರಾವಳಿಕಾಸರಗೋಡು : ಲಾರಿ ಮತ್ತು ಬೈಕ್ ನಡುವೆ ಅಪಘಾತ; ವಿದ್ಯಾರ್ಥಿ ಸಾವು

ಕಾಸರಗೋಡು : ಲಾರಿ ಮತ್ತು ಬೈಕ್ ನಡುವೆ ಅಪಘಾತ; ವಿದ್ಯಾರ್ಥಿ ಸಾವು

- Advertisement -
- Advertisement -

ಕಾಸರಗೋಡು : ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕುಂಬಳೆ ಸಮೀಪದ ಬಂಬ್ರಾಣ ಅಂಡಿತ್ತಡ್ಕ ದ ಯೂಸಫ್ ಕೈಫ್ ( 19) ಮೃತ ವಿದ್ಯಾರ್ಥಿ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ  ಯೂಸಫ್ ಕೈಫ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದಾನೆ.

ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದ ಕೈಫ್ ನಾಲ್ಕು ದಿನಗಳ ಹಿಂದೆ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಉಪ್ಪಳ ಸಮೀಪದ ಕುಕ್ಕಾರ್ ಎಂಬಲ್ಲಿ ಅಪಘಾತ ನಡೆದಿತ್ತು. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!