Saturday, June 6, 2026
Homeಕರಾವಳಿಮಂಗಳೂರು: ಉಳ್ಳಾಲದಲ್ಲಿ ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ,ಸವಾರ ಸಾವು

ಮಂಗಳೂರು: ಉಳ್ಳಾಲದಲ್ಲಿ ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ,ಸವಾರ ಸಾವು

- Advertisement -
- Advertisement -

ಮಂಗಳೂರು;  ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಅಂಗರಗುಂಡಿಯ ನಿವಾಸಿ ಮುಹಮ್ಮದ್ ನೌಫಾಲ್ (26) ಮೃತಪಟ್ಟಿದ್ದರೆ, ಸಹಸವಾರ ಉಮರ್ ಫಾರೂಕ್ ಗಾಯಗೊಂಡಿದ್ದಾರೆ. ನೌಫಾಲ್ ಬೈಕಂಪಾಡಿಯ ಎಪಿಎಂಸಿಯಲ್ಲಿ ತರಕಾರಿ ಅಂಗಡಿ ಹೊಂದಿದ್ದರು. ದಿನನಿತ್ಯ ಟೆಂಪೊದಲ್ಲಿ ಕಲ್ಲಾಪಿಗೆ ಬರುವ ನೌಫಾಲ್ ಇಂದು ಮುಂಜಾನೆ ಸ್ಕೂಟರಲ್ಲಿ ತರಕಾರಿ ಕೊಂಡೊಯ್ಯಲು ಬಂದಿದ್ದರು ಎನ್ನಲಾಗಿದೆ. ಈ ವೇಳೆ ಅಪಘಾತ ಸಂಭವಿಸಿದೆ.

ಇಬ್ಬರೂ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ಪಂಪ್ ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸಂದರ್ಭ ವೇಳೆ ಈ ಅಪಘಾತ ಸಂಭವಿಸಿದೆ. ಒಂದು ಸ್ಕೂಟರ್ ಢಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಇನ್ನೊಂದು ಸ್ಕೂಟರ್ ಕೂಡ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!