- Advertisement -


- Advertisement -
ಸುರತ್ಕಲ್: ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿ ನಡೆದಿದೆ.
ಮೃತರನ್ನು ಹಳೆಯಂಗಡಿ ಕದಿಕೆ ನಿವಾಸಿ ಇಮ್ತಿಯಾಝ್ (39) ಎಂದು ಗುರುತಿಸಲಾಗಿದೆ.
ಶಿಪ್ಪಿಂಗ್ ಕಂಪನಿಯೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಇಮ್ತಿಯಾಝ್, ಸೋಮವಾರ ಬೆಳಿಗ್ಗೆ ಪಣಂಬೂರಿನಲ್ಲಿರುವ ತಮ್ಮ ಲಾರಿ ಕಚೇರಿಗೆ ತೆರಳುತ್ತಿದ್ದ ವೇಳೆ ಬೈಕಂಪಾಡಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಾರ್ವಜನಿಕರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
- Advertisement -


