Monday, June 15, 2026
Homeತಾಜಾ ಸುದ್ದಿಮಾಣಿ: ಲಾರಿ ಹಾಗು ದ್ವಿಚಕ್ರ ವಾಹನ ನಡುವೆ ಡಿಕ್ಕಿ- ಬಾಲಕ ಸಾವು

ಮಾಣಿ: ಲಾರಿ ಹಾಗು ದ್ವಿಚಕ್ರ ವಾಹನ ನಡುವೆ ಡಿಕ್ಕಿ- ಬಾಲಕ ಸಾವು

- Advertisement -
- Advertisement -

ಮಾಣಿ ಶಾಲೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ತಂದೆಯೊಂದಿಗೆ ಮನೆಗೆ ತೆರಳುತ್ತಿದ್ದಾಗ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿ, ತಂದೆಯೂ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸಂಭವಿಸಿದೆ. ಮೃತರನ್ನು ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಅದ್ವಿತ್(11) ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡಿದ್ದ ಬಾಲಕನನ್ನು, ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ದಿನೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಡೋಳಿಯ ವಿಸ್ಡಮ್ ಶಾಲೆಯ ಆರನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿ ಸಂಜೆ ಶಾಲೆ ಬಿಟ್ಟು ತನ್ನ ತಂದೆ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದು ಪರಾರಿಯಾಗಿದೆ.

ಪರಾರಿಯಾಗಿದ್ದ ಲಾರಿಯನ್ನು ನೆಲ್ಯಾಡಿಯಲ್ಲಿ ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

- Advertisement -

Latest News

error: Content is protected !!