Tuesday, June 9, 2026
Homeಇತರಬಂಟ್ವಾಳ: ಖಾಸಗಿ ಬಸ್ಸು ಮತ್ತು ಆಟೋ ರಿಕ್ಷಾ ಮಧ್ಯೆ ಅಪಘಾತ...! ಆಟೋ ಚಾಲಕ ಹಾಗೂ ಪ್ರಯಾಣಿಕನಿಗೆ...

ಬಂಟ್ವಾಳ: ಖಾಸಗಿ ಬಸ್ಸು ಮತ್ತು ಆಟೋ ರಿಕ್ಷಾ ಮಧ್ಯೆ ಅಪಘಾತ…! ಆಟೋ ಚಾಲಕ ಹಾಗೂ ಪ್ರಯಾಣಿಕನಿಗೆ ಗಾಯ…!

- Advertisement -
- Advertisement -

ಬಂಟ್ವಾಳ: ಖಾಸಗಿ ಬಸ್ಸು ಮತ್ತು ಆಟೋ ರಿಕ್ಷಾ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಆಟೋ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡ ಘಟನೆ ಬಿ.ಸಿ.ರೋಡು – ಪೊಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ನೇರಳಕಟ್ಟೆ ನಿವಾಸಿಗಳಾದ ಮುಹಮ್ಮದ್ ನಿಹಾಲ್ ಮತ್ತು ಮುಹಮ್ಮದ್ ಹನೀಫ್ ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಳಲಿಯಿಂದ ಬಿ.ಸಿ.ರೋಡ್ ಕಡೆ ಬರುತ್ತಿದ್ದ ಶುಭಲಕ್ಷ್ಮೀ ಬಸ್ ಹಾಗೂ ಬಿ.ಸಿ.ರೋಡ್ ನಿಂದ ಅಡೂರು ಕಡೆ ತೆರಳುತ್ತಿದ್ದ ಆಟೋ ರಿಕ್ಷಾ ಕಲ್ಪನೆ ಇಳಿಜಾರು ಪುದೇಶದಲ್ಲಿ ಢಿಕ್ಕಿಯಾಗಿದೆ. ರಿಕ್ಷಾ ಚಾಲಕ ನಿಹಾಲ್ ಮತ್ತು ಪ್ರಯಾಣಿಕ ಹನೀಫ್ ಮದುವೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!