Saturday, June 6, 2026
Homeಕರಾವಳಿಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ; ಘಟನೆಯಲ್ಲಿ ಐವರು ಪ್ರಯಾಣಿಕರಿಗೆ ಗಾಯ

ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ; ಘಟನೆಯಲ್ಲಿ ಐವರು ಪ್ರಯಾಣಿಕರಿಗೆ ಗಾಯ

- Advertisement -
- Advertisement -

ಕಾರ್ಕಳ: ಇಲ್ಲಿನ ಮಾಳ ಎಸ್‌ಕೆ ಬಾರ್ಡ‌ರ್ ನಲ್ಲಿ ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಖಾಸಗಿ ಬಸ್ ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದು ಈ ವೇಳೆಯಲ್ಲಿ ಉಡುಪಿಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡವರು ಸಂಗಮೇಶ್ (55), ಸುವರ್ಣ (45), ಸಾಕ್ಷಿ (20), ಸವನ್ (25) ಮತ್ತು ರಾಘವೇಂದ್ರ (32) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!