Sunday, June 7, 2026
Homeಕರಾವಳಿಉಡುಪಿಉಡುಪಿ: ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು!

ಉಡುಪಿ: ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು!

- Advertisement -
- Advertisement -

ಉಡುಪಿ: ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರುವಿನಲ್ಲಿ ಮಂಗಳವಾರ ನಡೆದಿದೆ.

ಮಂಡ್ಯ ಮೂಲದ ನಾಗರಾಜು (40) ಮೃತ ವ್ಯಕ್ತಿ. ಕಾರು ಹಿಂಬದಿಯಿಂದ ಚಲಿಸುತಿದ್ದ ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರ ರಸ್ತೆಗೆ ಉರುಳಿಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯಗೊಂಡಿದ್ದರಿಂದ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ರೈಸ್ ಮಿಲ್ ನಲ್ಲಿ ಕೆಲಸ ಮಾಡುತಿದ್ದ ನಾಗರಾಜು ಕೆಲಸದ ನಿಮಿತ್ತ ಸಾಸ್ತಾನ ಕಡೆಗೆ ಸಂಚರಿಸುತ್ತಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ಬ್ರಹ್ಮಾವರ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!