Tuesday, July 21, 2026
Homeಕರಾವಳಿಮಂಗಳೂರು: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಡಿಕ್ಕಿ: ಸ್ಕೂಟರ್‌ ಸವಾರ ಮೃತ್ಯು

ಮಂಗಳೂರು: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಡಿಕ್ಕಿ: ಸ್ಕೂಟರ್‌ ಸವಾರ ಮೃತ್ಯು

- Advertisement -
- Advertisement -

ಮಂಗಳೂರು: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿ ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ನಡೆದಿದೆ.

ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಸಂದೇಶ್‌ (25) ಅಪಘಾತದಲ್ಲಿ ಮೃತಪಟ್ಟ ಯುವಕ. ಈತ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ಬೆಳಗಿನ ಜಾವ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂದೇಶ್‌ನನ್ನ ಆಸ್ಪತ್ರೆಗೆ ದಾಖಲಿಸಲಾಯ್ತಾದ್ರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

- Advertisement -

Latest News

error: Content is protected !!