Saturday, June 6, 2026
Homeಕರಾವಳಿಉಡುಪಿಕೋಟ: ಮಣೂರು ಬಳಿ ಲಾರಿ- ಬೈಕ್‌ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರ ಸ್ಥಿತಿ...

ಕೋಟ: ಮಣೂರು ಬಳಿ ಲಾರಿ- ಬೈಕ್‌ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

- Advertisement -
- Advertisement -

ಕೋಟ : ಬ್ರಹ್ಮಾವರ ತಾಲೂಕಿನ ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ಮದ್ಯೆ ಅಪಘಾತ ನಡೆದಿದ್ದು ಅಪಘಾತದಲ್ಲಿ ಓರ್ವ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಅದೇ ದಾರಿಯಾಗಿ ಕೋಟದಿಂದ ಕುಂಬಾಸಿ ಕಡೆಗೆ ಹೋಗುತ್ತಿದ್ದ ಬೈಕ್ ಸವಾರರು ಬಸ್ಸನ್ನು ಹಿಂದಿಕ್ಕುವ ಭರದಲ್ಲಿ ಕೆಟ್ಟು ನಿಂತ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಪಾದಚಾರಿ ಓರ್ವನಿಗೆ ಡಿಕ್ಕಿ ಹೊಡೆದಿದ್ದು ಅವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಪಾದಚಾರಿ ಪ್ರಸನ್ನ ದೇವಾಡಿಗ ಎಂದು ಗುರುತಿಸಲಾಗಿದೆ. ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!