Friday, June 5, 2026
Homeಕರಾವಳಿಉಡುಪಿಉಡುಪಿ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವು

ಉಡುಪಿ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವು

- Advertisement -
- Advertisement -

ಉಡುಪಿ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ನಡೆದಿದೆ.

ಮೃತ ಸ್ಯಾಮುಯೆಲ್‌ ಸದಾನಂದ ಕರ್ಕಡ(59) ಮೃತ ಯುವಕ. ಅತಿ ವೇಗದಿಂದ ಬಂದ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇದರ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದ ಎರಡು ಬೈಕ್ ಗಳು ಕೂಡ ಸಂಪೂರ್ಣ ಜಖಂಗೊಂಡಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!