Thursday, June 4, 2026
HomeUncategorizedಮಂಗಳೂರು: ಮುಲ್ಕಿಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ :   ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವನಿಗೆ ಗಂಭೀರ...

ಮಂಗಳೂರು: ಮುಲ್ಕಿಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ :   ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

- Advertisement -
- Advertisement -

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ,ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮುಲ್ಕಿಯಲ್ಲಿ ನಡೆದಿದೆ.

,ಕೊಳಕ್ಕಾಡಿ ನಿವಾಸಿ ಮನೀಷ್ ಮೃತ ವಿದ್ಯಾರ್ಥಿ.  ಮುಲ್ಕಿಯ ಖಾಸಗಿ ಕಾಲೇಜ್ ಒಂದರಲ್ಲಿ ಅಂತಿಮ ಬಿಸಿಎ ವಿದ್ಯಾರ್ಥಿ. ಇನ್ನೊಂದು ಬೈಕ್ ನಲ್ಲಿದ್ದ ಅದೇ ಕಾಲೇಜಿನ ದೀಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಮನೀಷ್ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ದೀಕ್ಷಿತ್ ಕಾಲು ತುಂಡಾಗಿರುವ ಬಗ್ಗೆ ವರದಿಯಾಗಿದೆ. ಸಂಚಾರಿ ಉತ್ತರ ವಲಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!