- Advertisement -
- Advertisement -
ಉಡುಪಿ: ಕುಕ್ಕಿಕಟ್ಟೆ ಡಯಾನ ಭಾಗ್ಯಮಂದಿರದ ಬಳಿ ಮಂಗಳವಾರ ರಾತ್ರಿ ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಇಬ್ಬರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತಕ್ಷಣ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಾಳುಗಳನ್ನು ಸಂಗಪ್ಪ ಹಾಗೂ ನವೀನ ಎಂದು ಗುರುತಿಸಲಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ.
- Advertisement -


