Thursday, June 25, 2026
Homeಕರಾವಳಿಕಾಸರಗೋಡುಕೇರಳ: ಎರಡು ಬಸ್‌ಗಳ ನಡುವೆ ಭೀಕರ ಅಪಘಾತ; 57 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಕೇರಳ: ಎರಡು ಬಸ್‌ಗಳ ನಡುವೆ ಭೀಕರ ಅಪಘಾತ; 57 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

- Advertisement -
- Advertisement -

ಕೇರಳ: ಇಲ್ಲಿನ ಕೊಲ್ಲಂ ಜಿಲ್ಲೆಯಲ್ಲಿ ಸೋಮವಾರ ಪ್ರವಾಸಿ ಬಸ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, 57 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


ಕೊಲ್ಲಂ ಗ್ರಾಮಾಂತರ ಪ್ರದೇಶದ ಚಿತ್ತಾರ ಪೊಲೀಸ್ ಠಾಣಾ ವ್ಯಾಪ್ತಿಯ ಕುಲತುಪ್ಪುಳ-ಮಾಡತಾರಾ ರಸ್ತೆಯಲ್ಲಿ ಸೋಮವಾರ ರಾತ್ರಿ 7.45 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಅಪಘಾತದಲ್ಲಿ ಗಾಯಗೊಂಡಿರುವ 42 ಮಂದಿಯನ್ನು ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿರುವ 15 ಮಂದಿಯನ್ನು ಕಡಕ್ಕಲ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ತಿಳಿಸಿದ್ದಾರೆ.


ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಗಾಯಗೊಂಡ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!