Sunday, June 7, 2026
Homeಕರಾವಳಿಪುತ್ತೂರು: ರಿಕ್ಷಾ ಮತ್ತು ಕಾರು ನಡುವೆ ಅಪಘಾತ...! ಇಬ್ಬರಿಗೆ ಗಾಯ...!

ಪುತ್ತೂರು: ರಿಕ್ಷಾ ಮತ್ತು ಕಾರು ನಡುವೆ ಅಪಘಾತ…! ಇಬ್ಬರಿಗೆ ಗಾಯ…!

- Advertisement -
- Advertisement -

ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಎದುರು ಡಿಕ್ಕಿ ಸಂಭವಿಸಿದ ಘಟನೆ ಇಂದು ಬೆಳಿಗ್ಗೆ ಆಸ್ಪತ್ರೆಯ ಮುಂಭಾಗದಲ್ಲಿ ನಡೆದಿದೆ. ಅಪಘಾತದಲ್ಲಿ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿರಿಗೆ ಗಾಯವಾಗಿದೆ.

ಆಟೋ ಚಾಲಕನನ್ನು ಕಂಬಳಬೆಟ್ಟು ನಿವಾಸಿ ಫಕೀರ್ ಸಾಹೇಬ ಎಂದು ಗುರುತಿಸಲಾಗಿದೆ. ಅವರಿಗೆ ತಲೆಯ ಭಾಗಕ್ಕೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ಮರೀಲ್ ನಿವಾಸಿ ಸುಬಹ್ಮಣ ಅವರಿಗೆ ಕೂಡ ಸಣ್ಣ ಪುಟ್ಟ ಗಾಯಗಳಾಗಿವೆ.

ಕಾರು ಪುತ್ತೂರು ಕಡೆಯಿಂದ ಬೊಳ್ತಾರ್ ಕಡೆಗೆ ಹೋಗುತ್ತಿತ್ತು, ಆಟೋ ಬೋಳ್ವಾರ್ ಕಡೆಯಿಂದ ಪುತ್ತೂರು ಬಸ್ ಸ್ಟ್ಯಾಂಡ್ ಕಡೆಗೆ ಬರುತ್ತಿದ್ದು, ಖಾಸಗಿ ಆಸ್ಪತ್ರೆಯ ಮುಂಭಾಗ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸ್ವಲ್ಪ ಮಟ್ಟಿಗೆ ಮತ್ತು ಆಟೋ ರಿಕ್ಷಾ ದ ಮುಂಭಾಗ ಪೂರ್ಣ ಪ್ರಮಾಣದಲ್ಲಿ ನಜ್ಜು ಗುಜ್ಜಾಗಿದೆ.

- Advertisement -

Latest News

error: Content is protected !!