Friday, June 5, 2026
Homeಕರಾವಳಿಪುತ್ತೂರು: ಪಾದಚಾರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವು...!

ಪುತ್ತೂರು: ಪಾದಚಾರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವು…!

- Advertisement -
- Advertisement -

ಪುತ್ತೂರು ಪೋಲಿಸ್ ಠಾಣಾ ಮುಂಭಾಗದಿಂದ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತರನ್ನು ಚಿಕ್ಕ ಪುತ್ತೂರಿನ ಕೇಶವ ಎಂದು ಗುರುತಿಸಲಾಗಿದೆ.

ಇವರು ಪುತ್ತೂರು ಹೆಗ್ಡೆ ಆರ್ಕೇಡ್ ಮುಂಭಾಗದಿಂದ ಮನೆಗೆ ನಡೆದುಕೊಂಡು ಹೋಗುತಿದ್ದ ವೇಳೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಇದರ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟ ಕೇಶವ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪೆಟ್ಟಿನ ರಭಸಕ್ಕೆ ಭಾರಿ ರಕ್ತಸ್ರಾವ ಆಗಿರುವುದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಪುತ್ತೂರು ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!