Friday, June 5, 2026
Homeಕರಾವಳಿಬೆಳ್ತಂಗಡಿ; ಕಾರು ಮತ್ತು ಬೈಕ್‌ ನಡುವೆ ಅಪಘಾತ , ಬೈಕ್ ಸವಾರ

ಬೆಳ್ತಂಗಡಿ; ಕಾರು ಮತ್ತು ಬೈಕ್‌ ನಡುವೆ ಅಪಘಾತ , ಬೈಕ್ ಸವಾರ

- Advertisement -
- Advertisement -

ಬೆಳ್ತಂಗಡಿ; ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಪಿನಡ್ಕದಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್‌ ಮೃತ ಬೈಕ್ ಸವಾರ.ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬೈಕ್‌ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ.ತಕ್ಷಣ ಬೈಕ್‌ ಸವಾರನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!