Friday, June 5, 2026
Homeಚಿಕ್ಕಮಗಳೂರುಚಾರ್ಮಾಡಿ ಘಾಟಿಯಲ್ಲಿ ವಾಹನ ಚಲಾಯಿಸುವಾಗ ಎಚ್ಚರ; ಮಂಜು ಕವಿದ ವಾತಾವರಣದಿಂದಾಗಿ ಎರಡು ಅಪಘಾತ

ಚಾರ್ಮಾಡಿ ಘಾಟಿಯಲ್ಲಿ ವಾಹನ ಚಲಾಯಿಸುವಾಗ ಎಚ್ಚರ; ಮಂಜು ಕವಿದ ವಾತಾವರಣದಿಂದಾಗಿ ಎರಡು ಅಪಘಾತ

- Advertisement -
- Advertisement -

ಚಾರ್ಮಾಡಿ ಘಾಟಿಯಲ್ಲಿ ವಾಹನ ಚಲಾಯಿಸುವಾಗ ವಾಹನ ಸವಾರರು ಎಚ್ಚರ ವಹಿಸಬೇಕಾಗಿದೆ. ಮಂಜು ಕವಿದ ವಾತಾವರಣದಿಂದಾಗಿ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೋ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬೊಲೆರೋ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು  ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರಿದಾದ ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಆ ಕಡೆಯಿಂದ ಧರ್ಮಸ್ಥಳದಿಂದ ಧಾರವಾಡಕ್ಕೆ ಸಾಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ಹೀಗಾಗಿ ವಾಹನ ಸವಾರರು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸುವಂತೆ ಕೋರಲಾಗಿದೆ.

- Advertisement -

Latest News

error: Content is protected !!