- Advertisement -
- Advertisement -
ಕಡಬ; ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಪ್ರಯಾಣಿಕರ ಕೈಗೆ ಗಂಭೀರ ಗಾಯಗಳಾಗಿರುವ ಘಟನೆ ಕಡಬ ಸಮೀಪದ ಇಚಿಲಂಪಾಡಿ ಬಳಿ ನಡೆದಿದೆ.
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬೆಂಗಳೂರಿನ ಕಾರು ಹಾಗೂ ಅದೇ ಮಾರ್ಗವಾಗಿ ಧರ್ಮಸ್ಥಳಕ್ಕೆ ಬರುತ್ತಿದ್ದ ಶಿವಮೊಗ್ಗದ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರ ಕೈಗೆ ತೀವ್ರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -