- Advertisement -
- Advertisement -
ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಕೊರಿಯರ್ ಸರ್ವಿಸ್ ಟೆಂಪೊವೊಂದು ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ.
ಘಟನೆಯಲ್ಲಿ ಟೆಂಪೊ ಚಾಲಕನ ಕೈ ಮುರಿದಿದ್ದು, ಗಂಭೀರ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಟೆಂಪೋ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಘಟನಾ ಸ್ಥಳಕ್ಕೆ ಕಾಪು ಠಾಣಾ ಪೊಲೀಸರು ತೆರಳಿದ್ದು, ಸಂಚಾರ ಸುಗಮಗೊಳಿಸಿದರು.
- Advertisement -