- Advertisement -
![]()
- Advertisement -
ಕಾಪು : ಕಾರಿಗೆ ಮುಳ್ಳು ಹಂದಿ ಅಡ್ಡ ಬಂದು, ಢಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ರಾ.ಹೆ. 66ರ ತೆಂಕ ಎರ್ಮಾಳಿನಲ್ಲಿ ಬುಧವಾರ ರಾತ್ರಿ ನಡೆದಿದೆ.
ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಮುಳ್ಳು ಹಂದಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡಿದೆ. ಇದರಿಂದ ಕಾರು ನಿಯಂತ್ರಣ ಕಳೆದುಕೊಂಡು ಸುಮಾರು ನೂರು ಮೀಟರ್ ಸಾಗಿ ತಗ್ಗಿನ ಪೊದೆಗೆ ಉರುಳಿದೆ.
ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರಿಗೆ ತಲೆಗೆ ಏಟು ತಗುಲಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕಾರಿನ ಹೊಡೆತಕ್ಕೆ ಮುಳ್ಳು ಹಂದಿ ಸ್ಥಳದಲ್ಲೇ ಮೃತ ಪಟ್ಟಿದ್ದು ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಎರಡು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ನವಿಲೊಂದು ಸ್ಕೂಟಿಗೆ ಅಡ್ಡ ಬಂದು ಸ್ಕೂಟಿ ಸವಾರ ಮೃತಪಟ್ಟಿದ್ದರು.
- Advertisement -


