Saturday, October 17, 2026
Homeಕರಾವಳಿವಿಟ್ಲ: ನಿಂತಿದ್ದ ಮಣ್ಣಿನ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು, ಸಹ ಸವಾರನಿಗೆ...

ವಿಟ್ಲ: ನಿಂತಿದ್ದ ಮಣ್ಣಿನ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು, ಸಹ ಸವಾರನಿಗೆ ಗಾಯ

- Advertisement -
- Advertisement -

ವಿಟ್ಲ: ನಿಂತಿದ್ದ ಮಣ್ಣಿನ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿ, ಸಹ ಸವಾರ ಗಾಯಗೊಂಡಿರುವ ಘಟನೆ ವಿಟ್ಲದ ಮಂಗಳಪದವು ಎಂಬಲ್ಲಿ ನಡೆದಿದೆ.

ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದಾಗ ಕನ್ಯಾನ ಕಡೆಯಿಂದ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಬೈಕ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇಬ್ಬರನ್ನೂ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಇರ್ಫಾನ್ (19) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಹಸವಾರ ಫಾರಿಸ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕ ಬೇಜಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ಚಾ ಕುಡಿಯಲು ಹೋಗಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -

Latest News

error: Content is protected !!