Tuesday, June 30, 2026
Homeಕರಾವಳಿಬಂಟ್ವಾಳ: ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿ...! ಬೈಕ್ ಸವಾರನಿಗೆ ಗಂಭೀರ ಗಾಯ..!

ಬಂಟ್ವಾಳ: ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿ…! ಬೈಕ್ ಸವಾರನಿಗೆ ಗಂಭೀರ ಗಾಯ..!

- Advertisement -
- Advertisement -

ಬಂಟ್ವಾಳ: ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೆಲ್ಕಾರ್ ಜಂಕ್ಷನ್’ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಗಾಯಗೊಂಡ ವ್ಯಕ್ತಿ ಗಣೇಶ್ ಎಂದು ತಿಳಿದು ಬಂದಿದೆ. ಮಾಣಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಮತ್ತು ಮೆಲ್ಕಾರ್ ನಿಂದ ಸಜಿಪ ಕಡೆ ಹೋಗುತ್ತಿದ್ದ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪೇಟೆಯಲ್ಲಿರುವ ವೃತ್ತಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವೃತ್ತವು ಸಂಪೂರ್ಣ ಒಡೆದು ಹೋಗಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Latest News

error: Content is protected !!