Sunday, June 7, 2026
Homeಕರಾವಳಿಕಡಬ: ನೆಲ್ಯಾಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಈಚರ್ ಲಾರಿ ನಡುವೆ ಅಪಘಾತ: ಬಸ್ಸಿನಲ್ಲಿದ್ದ ತಂದೆ ಮಗುವಿಗೆ‌ ಗಾಯ

ಕಡಬ: ನೆಲ್ಯಾಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಈಚರ್ ಲಾರಿ ನಡುವೆ ಅಪಘಾತ: ಬಸ್ಸಿನಲ್ಲಿದ್ದ ತಂದೆ ಮಗುವಿಗೆ‌ ಗಾಯ

- Advertisement -
- Advertisement -

ಕಡಬ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ತಂದೆ ಹಾಗೂ ಮಗು ಗಾಯಗೊಂಡಿರುವ ಘಟನೆ ಆ.27ರಂದು ಬೆಳಿಗ್ಗೆ  ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಡ್ಡಹೊಳೆಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ಮಗು ಹಾಗೂ ಮಗುವಿನ ತಂದೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಈಚರ್ ಲಾರಿಯ ಚಾಲಕನಿಗೂ ಸಣ್ಣಪುಟ್ಟ ಗಾಯವಾಗಿದೆ . ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!