Friday, June 5, 2026
Homeಕರಾವಳಿಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ಗೂಡ್ಸ್ ಟೆಂಪೊ ಹಾಗೂ ಪಿಕಪ್ ನಡುವೆ ಅಪಘಾತ: ಮೂವರಿಗೆ ಗಂಭೀರ ಗಾಯ

ಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ಗೂಡ್ಸ್ ಟೆಂಪೊ ಹಾಗೂ ಪಿಕಪ್ ನಡುವೆ ಅಪಘಾತ: ಮೂವರಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ: ಗೂಡ್ಸ್ ಟೆಂಪೊ ಹಾಗೂ ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಶ್ರೀ ರಾಮ ನಗರ ಪ್ರಗತಿ ಹಾರ್ಡ್ ವೇರ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಚಾಲಕರು ಹಾಗೂ ಪಿಕಪ್ ನಲ್ಲಿದ್ದ ಸಹಾಯಕ ಗಂಭೀರಗೊಂಡಿದ್ದಾರೆ. ಕಬ್ಬಿಣದ ರಾಡ್ ಹೇರಿಕೊಂಡು ಮಂಗಳೂರು ಕಡೆಯಿಂದ ಬರುತ್ತಿದ್ದ ಮಿನಿ ಲಾರಿ ಪುಂಜಾಲಕಟ್ಟೆಯಿಂದ ಬಂಟ್ವಾಳ ಕಡೆ ಸಾಗುತ್ತಿದ್ದ ಪಿಕಪ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮಿನಿ ಲಾರಿಯ ಮುಂಭಾಗ ಮತ್ತು ಹಿಂಭಾಗ ಬೇರೆ ಬೇರೆಯಾಗಿದೆ. ಪಿಕಪ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಮಿನಿ ಲಾರಿ ಚಾಲಕನ ಕೈ , ಕಾಲು ತುಂಡಾಗಿದ್ದು, ಇತರರೂ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ 108 ಅಂಬ್ಯುಲೆನ್ಸ್ ನಲ್ಲಿ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆ ಗೆ ಸಾಗಿಸಲಾಗಿದೆ. ಗಾಯಾಳುಗಳ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.

- Advertisement -

Latest News

error: Content is protected !!