Thursday, June 4, 2026
Homeಕರಾವಳಿಉಡುಪಿಉಡುಪಿ; ಸ್ಕೂಟರ್‌ಗೆ ಟಿಪ್ಪರ್ ಢಿಕ್ಕಿ, ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಉಡುಪಿ; ಸ್ಕೂಟರ್‌ಗೆ ಟಿಪ್ಪರ್ ಢಿಕ್ಕಿ, ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ; ಟಿಪ್ಪರ್ ಲಾರಿಯೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ರಾತ್ರಿ ನಡೆದಿದೆ. ಅಂಬಲಪಾಡಿಯ ಅಬ್ದುಲ್ ರಶೀದ್(60) ಮೃತ ದುರ್ದೈವಿ.

ರಶೀದ್ ಸ್ಕೂಟರ್‌ನಲ್ಲಿ ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಇವರು ಸಮೋಸ ವ್ಯಾಪಾರ ಮಾಡಿಕೊಂಡಿದ್ದರು.ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!