Monday, June 8, 2026
Homeಕರಾವಳಿಉಪ್ಪಿನಂಗಡಿ : ಬಸ್ಸಿನಡಿಗೆ ಬಿದ್ದು ತಾಯಿ -ಮಗು ಸ್ಥಳದಲ್ಲೇ ಸಾವು

ಉಪ್ಪಿನಂಗಡಿ : ಬಸ್ಸಿನಡಿಗೆ ಬಿದ್ದು ತಾಯಿ -ಮಗು ಸ್ಥಳದಲ್ಲೇ ಸಾವು

- Advertisement -
- Advertisement -

ಉಪ್ಪಿನಂಗಡಿ : ಅತೀ ವೇಗದಿಂದ ಬಸ್‌ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಒಂದು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್‌ ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ ತಾಲೂಕಿ ಶಿರ್ಲಾಲು ನಿವಾಸಿ ಸಾಹಿದಾ (25) ಮತ್ತು ಅವರ ಪುತ್ರ ಅಂದಾಜು 1 ವರ್ಷದ ಮಗು ಸಾಹಿಲ್ ಮೃತ ದುರ್ಧೈವಿಗಳು ಎಂದು ತಿಳಿದು ಬಂದಿದೆ.ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗನೊಂದಿಗೆ ತೆರಳುತ್ತಿದ್ದರು. ಈ ವೇಳೆ ಬಸ್ ಗೆ ಸಿಕ್ಕಿ ಕೆಳಗೆ ಬಿದ್ದಿದ್ದಾರೆ. ತಲೆಯ ಮೇಲೆ ಬಸ್ ಹರಿದ ಕಾರಣ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!