Thursday, June 4, 2026
Homeಕರಾವಳಿಕಾರ್ಕಳ: ಬೈಕ್ ನಿಂದ ಬಿದ್ದು ವ್ಯಕ್ತಿ ಸಾವು

ಕಾರ್ಕಳ: ಬೈಕ್ ನಿಂದ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಕಾರ್ಕಳ : ನಾಯಿ ಅಡ್ಡ ಬಂದಿದ್ದರಿಂದ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಅಜಿತ್‌ ಕುಮಾರ್ (63) ದುರ್ದೈವಿ. ಕಾರ್ಕಳ ಕಸಬಾದ ಗೋಮಟೇಶ್ವರ ಬೆಟ್ಟದ ಹಿಂಭಾಗದ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಗ್ಯಾಸ್ ಗೋಡೌನ್ ಬಳಿ ನಾಯಿಯೊಂದು ರಸ್ತೆಗೆ ಅಡ್ಡಬಂದಾಗ ಒಮ್ಮೆಗೇ ಬ್ರೇಕ್ ಹಾಕಿದ್ದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಅವರಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಿಸಿದ್ದರೂ, ನಿನ್ನೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!