Friday, June 5, 2026
Homeಕರಾವಳಿಉಡುಪಿಉಡುಪಿ: ಕಾರ್ಕಳ - ಪಡುಬಿದ್ರಿ ಜಂಕ್ಷನ್‍ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿಯೋರ್ವರ ಮೇಲೆ ಹರಿದ ಲಾರಿ...

ಉಡುಪಿ: ಕಾರ್ಕಳ – ಪಡುಬಿದ್ರಿ ಜಂಕ್ಷನ್‍ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿಯೋರ್ವರ ಮೇಲೆ ಹರಿದ ಲಾರಿ : ಗಂಭೀರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ: ಕಾರ್ಕಳ – ಪಡುಬಿದ್ರಿ ಜಂಕ್ಷನ್‍ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿಯೋರ್ವರ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಸಾಂತೂರು ಗ್ರಾಮದ ನಿವಾಸಿ, ಬಡಗಿ ಕೆಲಸ ಮಾಡುವ ಜಯರಾಮ ಆಚಾರ್ಯ (51)  ಮೃತ ದುರ್ದೈವಿ.

ಪಡುಬಿದ್ರಿಯ ಕಾರ್ಕಳ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ-66 ರ ಬದಿಯಲ್ಲಿ ಹೆದ್ದಾರಿ ದಾಟಲು ಕಾಯುತ್ತಿದ್ದ ಜಯರಾಮ ಆಚಾರ್ಯ ಅವರಿಗೆ ಲಾರಿ ಢಿಕ್ಕಿಯಾಗಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!