Monday, June 29, 2026
Homeಕರಾವಳಿಸುಳ್ಯದ ಪೆರಾಜೆಯಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ ಪಿಕಪ್ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಸುಳ್ಯದ ಪೆರಾಜೆಯಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ ಪಿಕಪ್ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಸುಳ್ಯ: ಬಸ್ ಗಾಗಿ ಕಾಯುತ್ತಿದ್ದ ವೇಳೆ ಪಿಕಪ್ ಡಿಕ್ಕಿ ಹೊಡೆದು ಓರ್ವ ಯುವಕ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಳ್ಯದ ಪೆರಾಜೆಯಲ್ಲಿ ನಡೆದಿದೆ.

ಮೃತ ಯುವಕ

ದುಗಲಡ್ಕದ ಮೂರು ಯುವಕರು ಪೆರಾಜೆಯಲ್ಲಿ ಅಡಿಕೆ ಮರ ಕಡಿಯುವ ಕೆಲಸ ಮಾಡಿ ಇಬ್ಬರು ಬೈಕಿನಲ್ಲಿ ತೆರಳೋದಕ್ಕೆ ರೆಡಿಯಾಗುತ್ತಿದ್ದರು.  ಇನ್ನೋರ್ವ ಬಸ್ಸಿಗಾಗಿ ಕಾಯುತ್ತಿದ್ದ. ಈ ಸಂದರ್ಭ ಎದುರಿನಿಂದ ಬಂದ ಪಿಕಪ್ ವಾಹನ ಬೈಕಿಗೆ ಡಿಕ್ಕಿ ಹೊಡೆದು ಬಳಿಕ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಬ್ಯಾರಿಕೇಡ್ ಪಕ್ಕದಲ್ಲಿ ನಿಂತು ಬಸ್ಸು ಕಾಯುತ್ತಿದ್ದ ಸಹಪಾಟಿಗೂ ಗಂಭೀರ ಗಾಯವಾಗಿದೆ.

ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯರು ಸುಳ್ಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯುವ ವೇಳೆ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಸಾವನ್ನಪ್ಪಿದ್ದ ಯುವಕನನ್ನು ದುಗಲಡ್ಕ ನಿವಾಸಿ ರಪೀಕ್ ಮರ್ಸಾದ್ ಎನ್ನಲಾಗಿದೆ. ಪಿಕಪ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!