Friday, June 5, 2026
Homeಕರಾವಳಿಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್!

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್!

- Advertisement -
- Advertisement -

ಸಕಲೇಶಪುರ : ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆಯೊಂದು ಮಾರನಹಳ್ಳಿ ಸಮೀಪ ಗುರುವಾರ ಮುಂಜಾನೆ ನಡೆದಿದೆ

ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದಂತಹ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು ಮುನ್ನೆಚ್ಚರಿಕೆಯ ಕ್ರಮವಾಗಿ ಮಾರನಹಳ್ಳಿ ಸಮೀಪ ವಾಹನಗಳ ಸಂಚಾರಕ್ಕೆ ನಿರ್ಬಂಧಗಳನ್ನು ಹೇರಲಾಗಿರುವ ಜೊತೆಗೆ ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.

ಟ್ಯಾಂಕರ್ ಉರುಳಿ ಬಿದ್ದಂತಹ ಪರಿಣಾಮ ಇಂಜಿನ್ ಒಳಗೆ ಚಾಲಕ ಸಿಕ್ಕಿಹಾಕಿಕೊಂಡಿದ್ದು, ಚಾಲಕನನ್ನು ಕ್ರೇನ್ ಸಹಾಯದಿಂದ ಮೇಲೆತ್ತಲು ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯರು ಸುಮಾರು ಎರಡು ಗಂಟೆಯಿಂದ ಹರಸಾಹಸವನ್ನು ಪಡುತ್ತಿದ್ದಾರೆ. ಗ್ಯಾಸ್ ಸೋರಿಕೆಯ ಭಯದಿಂದ ಘಟನಾ ಸ್ಥಳದ ಸುತ್ತಮುತ್ತ ವಾಹನ ಸಂಚಾರವನ್ನು ನಿರ್ಭಂದಿಸಿ ಕ್ರಮ ಕೈಗೊಳ್ಳಲಾಗಿದೆ.

- Advertisement -

Latest News

error: Content is protected !!