Thursday, June 4, 2026
Homeಕರಾವಳಿಉಡುಪಿಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ನಾಲ್ವರಿಗೆ ಗಾಯ, ಸಂಚಾರದಲ್ಲಿ ವ್ಯತ್ಯಯ

ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ನಾಲ್ವರಿಗೆ ಗಾಯ, ಸಂಚಾರದಲ್ಲಿ ವ್ಯತ್ಯಯ

- Advertisement -
- Advertisement -

ಉದ್ಯಾವರ: ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದಕ್ಕೆ ಹಿಂದಿನಿಂದ ಬಂದ ಕೊರಿಯರ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೆ ಗಾಯಗಳಾಗಿವೆ.

ಕಾಪು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಕಾರಿಗೆ ಉದ್ಯಾವರ ಅಲೀಮ್ ಸಾಬ್ಜು ಆಡಿಟೋರಿಯಂ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಕೋರಿಯರ್ ವಾಹನ ಡಿಕ್ಕಿ ಹೊಡೆದಿದೆ. ಕಾರೊಳಗೆ ನಾಲ್ವರು ಮಹಿಳೆಯರು ಮತ್ತು ಒಬ್ಬ ಬಾಲಕ ಪ್ರಯಾಣಿಸುತ್ತಿದ್ದರು.

ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಾಲಕನಿಗೆ ತಲೆಗೆ ಏಟು ಬಿದ್ದಿದೆ ಎನ್ನಲಾಗಿದೆ.ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಅಪಘಾತದಿಂದ ಕೆಲಹೊತ್ತು ರಾಷ್ಟೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.ಕಾಪು ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರ ಸುಗಮಗೊಳಿಸಿದರು.

- Advertisement -

Latest News

error: Content is protected !!