Thursday, June 4, 2026
Homeಪ್ರಮುಖ-ಸುದ್ದಿಧರ್ಮಸ್ಥಳಕ್ಕೆ ಬರುತ್ತಿದ್ದಾಗ ಭೀಕರ ಅಪಘಾತ ; ತಂದೆ ಮಗ ಸ್ಥಳದಲ್ಲೇ ಸಾವು

ಧರ್ಮಸ್ಥಳಕ್ಕೆ ಬರುತ್ತಿದ್ದಾಗ ಭೀಕರ ಅಪಘಾತ ; ತಂದೆ ಮಗ ಸ್ಥಳದಲ್ಲೇ ಸಾವು

- Advertisement -
- Advertisement -

ಬೆಳ್ತಂಗಡಿ; ಧರ್ಮಸ್ಥಳಕ್ಕೆ ಬರುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಅಂಜನಪ್ಪ (40), ಕಾರ್ತಿಕ್ (17) ಮೃತ ದುರ್ದೈವಿಗಳು.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ಕೂಡಿಗೆ ಸಮೀಪ ಈ ಘಟನೆ ನಡೆದಿದೆ. ಧರ್ಮಸ್ಥಳಕ್ಕೆಂದು 2 ಕಾರಿನಲ್ಲಿ 10 ಜನ ತೆರಳುತ್ತಿದ್ದರು. ಅದರಲ್ಲಿ ಒಂದು ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಮೂವರ ಸ್ಥಿತಿ ಚಿಂತಾಜನಕವಾಗಿದೆ.

- Advertisement -

Latest News

error: Content is protected !!