Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಓವರ್ ಟೇಕ್ ಮಾಡುವಾಗ ಅಪಘಾತ, ವ್ಯಕ್ತಿ ಸಾವು

ಬೆಳ್ತಂಗಡಿ; ಓವರ್ ಟೇಕ್ ಮಾಡುವಾಗ ಅಪಘಾತ, ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ; ಬೈಕ್ ಕಾರನ್ನು ಓವರ್ ಟೇಕ್ ಮಾಡುವಾಗ ನಿಯಂತ್ರಣ ಅಪಘಾತವಾಗಿ ಬೈಕ್ ಪಲ್ಟಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ಕಲ್ಕಣಿ ಎಂಬಲ್ಲಿ ನಡೆದಿದೆ. ಕಲ್ಲಗುಡ್ಡೆಯ ಟೀ ಪಾರ್ಕ್ ನಿವಾಸಿ ಸಯ್ಯದ್ ಪಾಶ(42) ಮೃತರು.

 ಸಯ್ಯದ್  ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರನ್ನು ಓವರ್ ಟೇಕ್ ಮಾಡಲು ಹೋಗಿ ಅಪಘಾತವಾಗಿದೆ. ಬೈಕ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದರಿಂದ ಅವರು ಸಯ್ಯದ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದರು.ಅಲ್ಲಿಂದ ಹೆಚ್ಚಿನ ಚಿಕಿತ್ಸೆ  ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!